Crime

ಮತ್ತೆ ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್

ನವದೆಹಲಿ: ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭ ಬಿಜೆಪಿಯಲ್ಲಿ ಟಿಕೆಟ್ ಸಿಗದ ಅಸಮಾಧಾನದಿಂದ ಕಾಂಗ್ರೇಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಮರಳಿ ತರುವ ಪ್ರಯತ್ನ ಮಾಡಿದೆ ಎಂದು ಮೂಲಗಳು ತಿಳಿಸಿದೆ.
ಈ ಕುರಿತಾಗಿ ಸದ್ಯ ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಮುಖ ಚರ್ಚೆ ನಡೆದಿದ್ದು, ಆ ಬಳಿಕ ಪಕ್ಷ ಸೇರುವ ನಿರ್ಧಾರ ಕೈಗೊಂಡಿದ್ದಾರೆ.

ದೆಹಲಿ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button