ಶಿರೂರಿನಲ್ಲಿ ಮೀನುಗಾರಿಕಾ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತ್ಯು

ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.

ಹಡವಿನಕೋಣೆ ಶಿರೂರಿನ ನನ್ನು ಅಬ್ಸುಲ್ ಸತ್ತರ್ (45 ) ಹಾಗೂ ಕುದ್ವಾಯಿ ರೋಡ್, ಭಟ್ಕಳ ನಿವಾಸಿ ಮಿಸ್ಬಾ ಯೂಸುಫ್ (48) ಎನ್ನಲಾಗಿದೆ.

ಭಾನುವಾರ ರಾತ್ರಿ 10-00 ಗಂಟೆಗೆ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ IND KA 03 MO-4827 ದೋಣಿಯಲ್ಲಿ 3 ಜನ ಮೀನುಗಾರರಿದ್ದರು. ಸೋಮವಾರ ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಮುಂಜಾನೆ 1.30 ಗಂಟೆ ವೇಳೆಗೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ಹಡವಿನಕೋಣೆ ಇವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ರವರು ರಕ್ಷಣೆ‌ ಮಾಡಿದ್ದಾರೆ.

ಈ ಭಾಗದಲ್ಲಿ ಕೆಲವೆ ತಿಂಗಳುಗಳ ಹಿಂದೆ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿದ್ದು ಈ ವರ್ಷ ಬೈಂದೂರು ಭಾಗದಲ್ಲಿ ಅತ್ಯಧಿಕ ಮೀನುಗಾರಿಕಾ ದುರಂತಗಳು ನಡೆದಿದೆ.
ಕರಾವಳಿ ಕಾವಲು ಪಡೆ ಹಾಗೂ ಆರಕ್ಷಕ ಸಿಬಂಧಿಗಳು ಆಗಮಿಸಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories