ಶಿರ್ವ: ವ್ಯಕ್ತಿಯೊಬ್ಬರು ಕಾಣೆಯಾಗಿದ್ದು ಪ್ರಕರಣ ದಾಖಲಾಗಿದೆ.
ಕಾಣೆಯಾದವರನ್ನು ಸುಬ್ರಾಯ(47) ಎಂದು ಗುರುತಿಸಲಾಗಿದೆ. ಅವರು ಕಾಪು ತಾಲೂಕು ಶಿರ್ವ ಗ್ರಾಮದ ಅರಸಿಕಟ್ಟೆ ಸರೋಜಮ್ಮ ಇವರ ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಾಗಿದ್ದಾರೆ.
ಫೆ.18 ರಂದು ತಾನು ಮನಸ್ಸಿಗೆ ಬಂದ ಕಡೆ ಹೋಗುತ್ತಿದ್ದೇನೆ ತನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಹೇಳಿ ಕರೆಯನ್ನು ಕಟ್ ಮಾಡಿದ್ದಾರೆ. ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿರುತ್ತದೆ. ಕಾಣೆಯಾದ ನೀಲಾನಂದ @ ಸುಬ್ರಾಯ ರವರನ್ನು ಸಂಬಂಧಿಕರ ಮನೆಯಲ್ಲಿ ಆಸು ಪಾಸು ಎಲ್ಲಾ ಕಡೆಗಳಲ್ಲಿ ಹುಡುಕಾಡಿದ್ದು ಅವರ ಇರುವಿಕೆಯ ಬಗ್ಗೆ ಈ ತನಕ ಪತ್ತೆಯಾಗಿರುವುದಿಲ್ಲ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 17/2024 ಕಲಂ: ಗಂಡಸು ಕಾಣೆಯಂತೆ ಪ್ರಕರಣ ದಾಖಲಾಗಿರುತ್ತದೆ.