ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣ: ಇಬ್ಬರ ಬಂಧನ

ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನದ ಹಿಂದೆ ನಡೆದಿದ್ದ ಘಟನೆಯ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಚಿತ್ರದುರ್ಗದ ಗಣೇಶ್ ಮತ್ತು ವಿನಯ್ ಎಂಬಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

ಆರೋಪಿಗಳು ಚಿತ್ರದುರ್ಗ ಸಮೀಪ ಪಂಡ್ರಹಳ್ಳಿಯವರು. ಚಿತ್ರದುರ್ಗದಿಂದ ಜೋಗಕ್ಕೆ ಹೋಗುವ ಮಾರ್ಗದಲ್ಲಿ ಆರೋಪಿಗಳು ಈ ಕೃತ್ಯ ನಡೆಸಿದ್ದಾರೆ. ಕೃಷಿ ಕೆಲಸ ಮಾಡಿಕೊಂಡಿದ್ದವರು. ಪ್ರತಿಮೆ ಧ್ವಂಸ ಮಾಡಿದ ನಂತರ ಶಿವಮೊಗ್ಗಕ್ಕೆ ಹೋಗಿ ವಾಪಸ್ ಹಳ್ಳಿಗೆ ಹೋಗಿದ್ದರು ಎಂದು ಮಾಹಿತಿ ನೀಡಿದರು.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಇನ್ನಷ್ಟು ವಿಷಯ ತಿಳಿದು ಬರಲಿದೆ. ತಾಂತ್ರಿಕ ಹಾಗೂ ಸ್ಥಳೀಯ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರತಿಮೆ ಮರು ಸ್ಥಾಪನೆ ಸಂಬಂಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.

Latest Indian news

Popular Stories