ಶಿವಮೊಗ್ಗ: ರಾಗಿಗುಡ್ಡದಲ್ಲಿ 6ನೇ ದಿನವೂ ನಿಷೇಧಾಜ್ಞೆ ಮುಂದುವರಿಕೆ

ಶಿವಮೊಗ್ಗ: ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ನಡೆದಿತ್ತು.ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರು. ಈ ಪ್ರಯುಕ್ತ ರಾಗಿಗುಡ್ಡದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇಂದು ರಾಗಿಗುಡ್ಡದಲ್ಲಿ 6ನೇ ದಿನವೂ ನಿಷೇಧಾಜ್ಞೆ ಮುಂದುವರಿದಿದೆ, ಶಾಲೆ, ಕಾಲೇಜ್, ಉದ್ಯೋಗಕ್ಕೆ ಹೋಗಲು ಮಾತ್ರ ಅವಕಾಶ ನೀಡಲಾಗಿದೆ.

ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪೊಲೀಸರು ಹದ್ದಿನ ಕಣ್ಣನ್ನಿಟ್ಟಿದ್ದು, ಮತ್ತೆ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.

Latest Indian news

Popular Stories