
Crime
ಕರ್ನಾಟಕ ಬಿಜೆಪಿ ಅಧ್ಯಕ್ಷೆಯಾಗಿ ಶೋಭಾ ಕರಂದ್ಲಾಜೆ ನೇಮಕ ಸಾಧ್ಯತೆ?
ಬೆಂಗಳೂರು :ಕರ್ನಾಟಕದ ಬಿಜೆಪಿ ಅಧ್ಯಕ್ಷರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ಇದರ ಬಗ್ಗೆ ಸಂಶಯ ವ್ಯಕ್ತವಾಗಿದೆ.
ರಾಜ್ಯಾಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಹೈಕಮಾಂಡ್ ಈಗಾಗಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದು, ಶೀಘ್ರದಲ್ಲೇ ನಿರ್ಧಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಪಕ್ಷ ಸಂಘಟನೆ ದೃಷ್ಟಿಯಿಂದ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಪರಿಗಣಿಸುವಂತೆ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಅಲ್ಲದೆ ಕಳೆದ 5 ತಿಂಗಳಿನಿಂದ ಖಾಲಿ ಇರುವ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ವಿಪಕ್ಷ ನಾಯಕರನ್ನಾಗಿ ಮಾಡಲು ಆಸಕ್ತಿ ಹೊಂದಿದೆ ಎಂದು ವರದಿಗಳು ಹೇಳಿವೆ.




