
Crime
ಬಿಳಿಗೇರಿಯ ಶ್ರೀ ಅರ್ಧನಾರೀಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯುತ್ತಿರುವ ಅಷ್ಟಬಂಧ ದ್ರವ್ಯಕಲಶೋತ್ಸವ
ಮಡಿಕೇರಿ ಜ. 7 : ಬಿಳಿಗೇರಿಯ ಶ್ರೀ ಅರ್ಧನಾರೀಶ್ವರ ದೇವಾಲಯದಲ್ಲಿ ಅಷ್ಟಬಂಧ ದ್ರವ್ಯಕಲಶೋತ್ಸವಕ್ಕೆ ಚಾಲನೆ ನೀಡಲಾಗಿದ್ದು, ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು.
ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮಹಾಸಂಕಲ್ಪ, ಪುಣ್ಯಾಹ, ಪ್ರಾಸಾದ ಶುದ್ಧಿ, ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಬಲಿ, ಗಣಪತಿ ಹೋಮ, ಬಿಂಭಶುದ್ಧಿ ಕಲಶ ಪೂಜೆ, ಬಿಂಬಶುದ್ಧಿ, ಕಲಶಾಭಿಷೇಕ, ಪ್ರೋಕ್ತ ಹೋಮ, ಪ್ರಾಯಶ್ಚಿತ್ತ ಹೋಮ, ಶಾಂತಿ ಹೋಮ, ಹೋಮ ಕಲಶಾಭಿಷೇಕ ನಡೆಯಿತು.
ಮಧ್ಯಾಹ್ನದ ಮಹಾ ಪೂಜೆ ನಂತರ ಕುಂಭೇಶ ಕರ್ಕರಿ ಕಲಶ ಪೂಜೆ, ಅಧಿವಾಸ ಹೋಮ ಹಾಗೂ ದ್ರವ್ಯಕಲಶ ಪೂಜೆ, ಪರಿಕಲಶ ಪೂಜೆ, ಕಲಶಾಧಿವಾಸ ಸೇರಿದಂತೆ ಮೊದಲಾದ ವಿಧಿ ವಿಧಾನಗಳು ಜರುಗಿದವು.
ಅಷ್ಟಬಂಧ ದ್ರವ್ಯಕಲಶೋತ್ಸವದ ಪ್ರಯುಕ್ತ ಭಕ್ತಾಧಿಗಳಿಗೆ ದೇವಾಲಯದಲ್ಲಿ ಬೆಳಗ್ಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಅನ್ನದಾನ ನಡೆಯಿತು.




