ಸಿದ್ದಾಪುರದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಹಾಯಕ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಶಾ (52) ರವರು ಸಿದ್ದಾಪುರದ ವ್ಯವಸಾಯ ಸೇವಾ ಸಹಕಾರಿ ಸಂಘ ದಲ್ಲಿ ಸಹಾಯಕ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದು ಬುಧವಾರ ಬೆಳಿಗ್ಗೆ 09:00 ಗಂಟೆಗೆ ಕುಂದಾಪುರ ತಾಲೂಕು ಸಿದ್ದಾಪುರ ಗ್ರಾಮದ ವಾರಾಹಿ ರಸ್ತೆ ಎಂಬಲ್ಲಿನ ವಾಸದ ಮನೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಿದ್ದಾರೆ.
12:30 ಗಂಟೆಗೆ ವ್ಯವಸಾಯ ಸೇವಾ ಸಹಕಾರಿ ಸಂಘ ದಲ್ಲಿ ಮ್ಯಾನೇಜರ್ ಮಹೇಶ್ ರವರು ಕರೆ ಮಾಡಿ ಆಶಾ ರವರು ಅರ್ಜೇಂಟಾಗಿ ಮನೆಗೆ ಹೋಗಿರುತ್ತಾರೆ ಎಂದು ತಿಳಿಸಿದ್ದು, ಅವರ ಪತಿ ಮನೆಗೆ ಹೋಗಿ ಮನೆಯ ಮಾಳಿಗೆಗೆ ತೆರಳಿ ಕೋಣೆಯನ ಬಾಗಿಲನ್ನು ಒಡೆದು ನೋಡಿದಾಗ ಕೋಣೆಯ ಶೀಟಿಗೆ ಅಳವಡಿಸಿದ ಕಬ್ಬಿಣದ ರಾಡಿಗೆ ನೈಲಾನ್ ಹಗ್ಗ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಕೆಳಗೆ ಇಳಿಸಿ ಒಂದು ವಾಹನದಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯಾಧಿಕಾರಿಯವರು ಆಶಾರವರು ಈಗಾಗಲೇ ಮೃತಪಟ್ಟಿರುವುದನ್ನು ಧೃಡಪಡಿಸಿದ್ದಾರೆ.
ಮೃತ ಆಶಾ ರವರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕೆಲದ ಒತ್ತಡದಿಂದ ಅಥವಾ ಇನ್ನಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 14/2024 ಕಲಂ: 174 ಸಿ.ಆರ್.ಪಿ.,ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.