Crime

ಎಸ್.ಎಸ್.ಎಲ್.ಸಿ ಪರೀಕ್ಷೆ : 904 ವಿದ್ಯಾರ್ಥಿಗಳು ಗೈರು

ರಾಯಚೂರು,ಸೆ.29:- ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ಸೆ.29ರ ಮಂಗಳವಾರ ವಿಜ್ಞಾನ ವಿಷಯದ ಪರೀಕ್ಷೆ ನಡೆಯಿತು.
ಜಿಲ್ಲೆಯ ಒಟ್ಟು 33 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ವಿಜ್ಞಾನ ವಿಷಯದ ಪರೀಕ್ಷೆ ಬರೆಯಲು 7,255 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 6,351 ವಿದ್ಯಾರ್ಥಿಗಳು ಹಾಜರಾಗಿ 904 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಯಾವುದೇ ಡಿಬಾರ್, ಪರೀಕ್ಷಾ ಕೇಂದ್ರದಿಂದ ಹೊರ ಹಾಕಿದ ಮತ್ತು ನಕಲಿ ವಿದ್ಯಾರ್ಥಿಗಳ ಪ್ರಕರಣ ವರದಿಯಾಗಿಲ್ಲವೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button