Crime

ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ಅಭಿನಂದನೆ ಎಸ್‌ಟಿ ಮೀಸಲಾತಿ ಶೇ. ೭.೫ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿಗೆ ಮನವಿ

ರಾಯಚೂರು: ಪರಿಶಿಷ್ಟ ಪಂಗಡಗಳ ಸಮುದಾಯದ ಬಹುದಿನದ ಬೇಡಿಕೆಯಾಗಿರುವ ಶೇ. ೭.೫ ಮೀಸಲಾತಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯಾಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ತಿಪ್ಪರಾಜು ಹವಲ್ದಾರ ನೇತೃತ್ವದ ನಿಯೋಗದ ಮೂಲಕ ಇಂದು ಮನವಿ ಸಲ್ಲಿಸಲಾಯಿತು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೆಟ್ಟಿ ಮಾಡಿರುವ ತಿಪ್ಪರಾಜು ಹವಲ್ದಾರ ಅವರು ಪರಿಶಿಷ್ಟ ಪಂಗಡಗಳ ಸಮುದಾಯದ ಬಹುದಿನಗಳ ಬೇಡಿಕೆಯಾಗಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆ ಮಾಡಿರುವುವುದು ಅತ್ಯಂತ ಸ್ವಾಗತಾರ್ಹವಾಗಿದೆ. ತಾವು ಮುಖ್ಯಮಂತ್ರಿಯಾದ ನಂತರ ನಡೆದ ಮೊದಲ ಸಚಿವ ಸಂಪುಟದಲ್ಲಿಯೇ ಪ್ರತ್ಯೇಕ ಎಸ್‌ಟಿ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ನಿರ್ಧಾರ ಕೈಗೊಂಡಿರುವುದು ಐತಿಹಾಸಿಕ ನಿರ್ಧಾರವಾಗಿದೆ ಎಂದು ಮುಖ್ಯಮಂತ್ರಿಗಳನ್ನು ಅಭಿನಂದಿಸಿದರು.
ಈಗ ಪರಿಶಿಷ್ಟ ಪಂಗಡಕ್ಕೆ ಕೇವಲ ಶೇ. ೩ರಷ್ಟು ಮೀಸಲಾತಿ ಇದೆ. ಜನಸಂಖ್ಯೆಗೆ ತಕ್ಕಂತೆ ಶೇ. ೭.೫ಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕಾಗಿದೆ. ಇದಕ್ಕಾಗಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಸಮುದಾಯದ ಜನಪ್ರತಿನಿಧಿಗಳು, ಸಮುದಾಯದ ಸಂಘಟನೆಗಳು ಹಾಗೂ ಸಮುದಾಯದವರು ನಿರಂತರ ಹೋರಾಟ ಮಾಡುತ್ತಿದ್ದೇವೆ. ಅಲ್ಲದೆ, ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ನ್ಯಾಯಮೂತಿ ನಾಗಮೋಹನದಾಸ್ ಅವರ ನೇತೃತ್ವದ ಆಯೋಗ ರಚಿಸಿದ್ದರು. ಈಗಾಗಲೇ ಆಯೋಗ ಸರಕಾರಕ್ಕೆ ವರದಿ ಸಲ್ಲಿಸಿದೆ. ಆ ವರದಿ ಆಧಾರದ ಮೇಲೆ ಶೇ. ೭.೫ ಮೀಸಲಾತಿಯನ್ನು ನೀಡುವ ಮೂಲಕ ಸಮುದಾಯದ ಬೇಡಿಕೆ ಈಡೇರಿಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದ ಪದಾಧಿಕಾರಿಗಳಾದ ನರಸಿಂಹನಾಯಕ, ಮಂಜುನಾಥ ಓಲೆಕಾರ, ಮಹಾಂತೇಶ ನಾಯಕ ಹಾಗೂ ಇತರರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button