ಶಿವಮೊಗ್ಗ: ಬೈಕ್ ಅಪಘಾತ – ವಿದ್ಯಾರ್ಥಿ ಮೃತ್ಯು

ಶಿವಮೊಗ್ಗ: ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ವಿದ್ಯಾರ್ಥಿಯೊಬ್ಬ ಬೈಕ್‌ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ 60 ಅಡಿ ರಸ್ತೆಯಲ್ಲಿ ಸಂಭವಿಸಿದೆ.

ಗೌತಮ್‌ (21) ಮೃತ ವಿದ್ಯಾರ್ಥಿ.

ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಕಾಶಿಪುರದಲ್ಲಿರುವ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಬೈಕ್‌ ಅಪಘಾತಕ್ಕೀಡಾಗಿ ಗೌತಮ್‌ಗೆ ತೀವ್ರ ರಕ್ತಸ್ರಾವ ಉಂಟಾಗಿದ್ದು, ಅತ ಸ್ಥಳದಲ್ಲೇ ಸಾವನ್ನಪ್ಪಿದ ಎಂದು ತಿಳಿದು ಬಂದಿದೆ.

ದೊಡ್ಡಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Latest Indian news

Popular Stories