ಉಡುಪಿ: ಸಮಾಜ ಸೇವಕ‌ ಲಿಲಾಧರ್ ಶೆಟ್ಟಿ ಮತ್ತು ಅವರ ಪತ್ನಿ ಆತ್ಮಹತ್ಯೆ

ಉಡುಪಿ: ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಮಂಗಳವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ

ಕೌಟಂಬಿಕ ಹಾಗೂ ಆರ್ಥಿಕ ಸಮಸ್ಯೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಇವರು ರಾತ್ರಿ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಮ್ಯ ಸ್ವಭಾವದವರಾಗಿದ್ದ ಲೀಲಾಧರ ಶೆಟ್ಟಿ ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಸದಾ ಸಮಾಜಪರ ಕಾಳಜಿ ಹೊಂದಿದ್ದ ಅವರು ಯಾವುದೇ ಕ್ಷಣದಲ್ಲಿ ಕೂಡ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಆದರೂ ಇತ್ತೀಚೆಗೆ ಹಣಕಾಸಿನ ತೊಂದರೆ ಕೂಡ ಹೊಂದಿದ್ದರು ಎನ್ನಲಾಗಿದೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Latest Indian news

Popular Stories