Crime

ಕೇಂದ್ರದ ವಿರುದ್ಧ ಸುಪ್ರೀಂ ಕಿಡಿ

ದೆಹಲಿ,ಜ.11:- ಕೃಷಿ ಕಾಯ್ದೆಗಳ ವಿರುದ್ಧ ರಾಜಧಾನಿ ಗಡಿಯಲ್ಲಿ ರೈತರ ಪ್ರತಿಬಟನೆ ಮುಂದುವರೆದಿದೆ. ಈ ಮಧ್ಯೆ ಈ ವಿಷಯದಲ್ಲಿ ಕೇಂದ್ರ ಸರಕಾರ ಅನುಸರಿಸುತ್ತಿರುವ ನೀತಿಯ ಬಗ್ಗೆ ಸರ್ವೋಚ್ಚ ನ್ಯಾಯಾಲಯ ತೀವ್ರ ಬೇಸರ ವ್ಯಕ್ತಪಡಿಸಿದೆ. ನಿಮ್ಮ ನಡೆ ಸಮಾಧಾನಕರವಾಗಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟವಾದ ಮಾತುಗಳಲ್ಲಿ ಚಾಟಿ ಬೀಸಿದೆ.
ರೈತರೊಂದಿಗೆ ಕೇಂದ್ರ ಸರಕಾರ ನಡೆಸುತ್ತಿರುವ ಮಾತುಕತೆಯ ಬಗ್ಗೆಯೂ ಸುಪ್ರೀಂಕೋರ್ಟ್ ಬೇಸರ ವ್ಯಕ್ತಪಡಿಸಿದೆ. ನೀವು ಹೇಗೆ, ಯಾವ ರೀತಿಯ ಮಾತುಕತೆ ನಡೆಸುತ್ತಿದ್ದೀರಿ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಈ ಹಿಂದೆಯೂ ಸರ್ವೋಚ್ಚ ನ್ಯಾಯಾಲಯವು ಹಲವು ಬಾರಿ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟದ ವಿಷಯದಲ್ಲಿ ಕೇಂದ್ರ ಸರಕಾರ ತಳೆದಿರುವ ನಿಲುವನ್ನು ಟೀಕಿಸಿದೆ. ಜೊತೆಗೆ ಕೃಷಿ ಸಂಬಂಧಿತ ಕಾಯ್ದೆಗಳಿಂದಾಗುವ ಪರಿಣಾಮಗಳು ಮತ್ತು ರೈತರಲ್ಲಿನ ಈ ಕುರಿತ ಆತಂಕದ ಬಗ್ಗೆ ಪರಿಶೀಲನೆ ನಡೆಸಲು ತಜ್ಞರ ಸಮಿತಿ ರಚಿಸಬೇಕೆಂಬ ಸಲಹೆಯನ್ನೂ ನೀಡಿದೆ.
ಈ ಮಧ್ಯೆ ಕೇಂದ್ರ ಸರಕಾರದ ಮೂರೂ ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆಗಳ ಸಾಂವಿಧಾನಿಕ ಮಾನ್ಯತೆ ಕುರಿತು ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಮುಖ್ಯನ್ಯಾಯಮೂರ್ತಿಯವರ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button