ಅನೈತಿಕ ಸಂಬಂಧ ಶಂಕೆ: ಜೋಡಿ ಕೊಲೆ

ವಿಜಯಪುರ: ಅನೈತಿಕ ಸಂಬಂಧದ ಸಂಶಯದ ಹಿನ್ನೆಲೆಯಲ್ಲಿ ಜೋಡಿ ಕೊಲೆಯಾದ ಘಟನೆ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಜಮೀನೊಂದರಲ್ಲಿ ಸೋಮವಾರ ರಾತ್ರಿ ನಡೆದಿದೆ.

ಸೋಮನಿಂಗ ಕುಂಬಾರ್ (40) ಮತ್ತು ರೇಣುಕಾ ತಳವಾರ್(35) ಕೊಲೆಯಾದವರು. ಗಣಿ ಗ್ರಾಮಕ್ಕೆ ಬರುವ ಮೊದಲೇ ಇಬ್ಬರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆ ಯಾರೂ ಮಾಡಿದರು? ಕೊಲೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಮಂಗಳವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Latest Indian news

Popular Stories