ತಮಿಳುನಾಡು : ಜಿಲ್ಲೆಯ ವಿರಾಗಲೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9ಮಂದಿ ಮೃತಪಟ್ಟು ಐವರು ಗಂಭೀರ ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ಹಠಾತ್ ಬೆಂಕಿ ಕಾಣಿಸಿಕೊಂಡಿತ್ತು ನಂತರ ಕ್ಷಣಾರ್ಧದಲ್ಲಿ ಪಟಾಕಿ ತಯಾರಿಕಾ ಘಟಕ ಸುಟ್ಟು ಕರಕಲಾಗಿದೆ ಎನ್ನಲಾಗುತ್ತಿದ್ದು ಘಟನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ.
ಪಟಾಕಿ ತಯಾರಿಕಾ ಘಟಕದಲ್ಲಿ ಸುಮಾರು 30 ಕಾರ್ಮಿಕರು ಕೆಲಸ ಮಾಡುತ್ತಿದ್ದರು.ಗಾಯಗೊಂಡವರನ್ನು ಚಿಕಿತ್ಸೆಗಾಗಿ ಅರಿಯಲೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.