ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ‘CWMA’ ಆದೇಶ

ಬೆಂಗಳೂರು: ಅಕ್ಟೋಬರ್.1ರಿಂದ 16ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಸೂಚಿಸಲಾಗಿತ್ತು.

ಆದ್ರೇ ಕರ್ನಾಟಕದ ಮನವಿಗೆ ಮಣಿಯದೇ, CWMA, CWRA ಆದೇಶವನ್ನು ಎತ್ತಿ ಹಿಡಿದು, ಅಕ್ಟೋಬರ್.31ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ.ಈ ಸಂಬಂಧ ದೆಹಲಿಯ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಕಚೇರಿಯಲ್ಲಿ ಇಂದು ಮಹತ್ವದ ಸಭೆ ನಡೆಯಿತು.

ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಿತು. ಅಂತಿಮವಾಗಿ ಅಕ್ಟೋಬರ್ 16ರಿಂದ 31ರವರೆಗೆ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ. ಅಲ್ಲದೇ CWRA ಆದೇಶವನ್ನು ತಪ್ಪದೇ ಪಾಲಿಸುವಂತೆ CWMA ಕರ್ನಾಟಕಕ್ಕೆ ಖಡಕ್ ಸೂಚನೆ ನೀಡುವ ಮೂಲಕ ಬಿಗ್ ಶಾಕ್ ನೀಡಿದೆ.

Latest Indian news

Popular Stories