Crime

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಪ್ರಕಟ

ಕಲಬುರಗಿ.ಅ.1:-ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಸಲು ಚುನಾವಣಾಧಿಕಾರಿಗಳಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ.ಎನ್.ವಿ.ಪ್ರಸಾದ ಅವರು ಅಕ್ಟೋಬರ್ 1 ರಂದು ಚುನಾವಣಾ ಅಧಿಸೂಚನೆ ಪ್ರಕಟಿಸಿದ್ದಾರೆ.
ಅಧಿಸೂಚನೆಯನ್ವಯ ನಾಮಪತ್ರ ಸಲ್ಲಿಸಲು 2020ರ ಅಕ್ಟೋಬರ್ 8 ಕೊನೆಯ ದಿನವಾಗಿದೆ. ನಾಮಪತ್ರಗಳನ್ನು ಅಕ್ಟೋಬರ್ 1 ರಿಂದ 8ರ ವರೆಗೆ (ಸಾರ್ವಜನಿಕ ರಜೆಗಳನ್ನು ಹೊರತುಪಡಿಸಿ) ಪ್ರತಿದಿನ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಕಾನ್ಫೆರೆನ್ಸ್ ಸಭಾಂಗಣ, ಎರಡನೇ ಮಹಡಿ, ಮಿನಿ ವಿಧಾನಸೌಧ ಕಲಬುರಗಿ ಇಲ್ಲಿ ಸಲ್ಲಿಸಬಹುದಾಗಿದೆ.
ಸ್ವೀಕೃತ ನಾಮಪತ್ರಗಳ ಪರಿಶೀಲನಾ ಕಾರ್ಯ ಅಕ್ಟೋಬರ್ 9 ರಂದು ನಡೆಯಲಿದ್ದು. ನಾಮಪತ್ರ ಹಿಂದಕ್ಕೆ ಪಡೆಯಲು ಅಕ್ಟೋಬರ್ 12 ಕೊನೆಯ ದಿನವಾಗಿರುತ್ತದೆ. ಅಕ್ಟೋಬರ್ 28 ರಂದು ಬೆಳಿಗ್ಗೆ 8 ರಿಂದ ಸಾಯಂಕಾಲ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, 2020ರ ನವೆಂಬರ್ 2 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯು ಕಲಬುರಗಿ ವಿಭಾಗದ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು ಹೊಂದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button