ವಾಹನ ಅಡ್ಡಗಟ್ಟಿ 50 ಲಕ್ಷ ನಗದು ದೋಚಿದ ಕಳ್ಳರು

ಪೊನಂಪೇಟೆ ತಾಲೂಕು ಗೋಣಿಕೊಪ್ಪಲು ಮೈಸೂರು ರಾಜ್ಯ ಹೆದ್ದಾರಿಯ ತಿತಿಮತಿ ಭದ್ರಕೋಳ ಸಮೀಪ ನಿನ್ನೆ ಕೇರಳ ಮೂಲದ ವ್ಯಕ್ತಿಗಳು ಈ ಮಾರ್ಗವಾಗಿ ಸಂಚರಿಸುತ್ತಿರುವಾಗ ಅವರನ್ನು ಅಡ್ಡಗಟ್ಟಿ ಹಣ ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಅಂದಾಜು 50 ಲಕ್ಷಕ್ಕೂ ಹೆಚ್ಚು ಹಣ ದರೋಡೆಯಾಗಿದೆ ಎಂದು ಹೇಳಲಾಗುತ್ತಿದೆ. ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಹಣ ಕಳೆದುಕೊಂಡವರು ರಾತ್ರಿ ದೂರು ನೀಡಿದ್ದಾರೆ. ಇದೀಗ ವಿಶೇಷ ತನಿಖಾ ತಂಡ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ರಾಮರಾಜು, ವಿರಾಜಪೇಟೆ ತಾಲೂಕು ಡಿ ವೈ ಎಸ್ ಪಿ, ಗೋಣಿಕೊಪ್ಪಲು ಹಾಗೂ ವಿರಾಜಪೇಟೆ ವೃತ್ತ ನಿರೀಕ್ಷಕರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪತ್ತೆಯಾದ ಕಾರು:

ತಿತಿಮಿತಿ ಭದ್ರಗೊಳ ಬಳಿ ಕಾರು ಸಹಿತ 50 ಲಕ್ಷ ರೂಪಾಯಿ ದರೋಡೆ ಪ್ರಕರಣ ಆರೋಪಿಗಳು ಅಪರಿಸಿದ ಕಾರು ಕೊಳ್ತೋಡ್ ಬೈಗೋಡಿನಲ್ಲಿ ಪತ್ತೆ

ಕೇರಳದ ಮಲಪುರಂ ಜಿಲ್ಲೆಯ ಗುತ್ತಿಗೆದಾರ ಕೆ.ಶಂಜಾದ್ ಹಾಗೂ ಆತನ ಸ್ನೇಹಿತ ಐನು ಎಂಬುವರು ತಮ್ಮ ಬಳಿ ಇದ್ದ 750 ಗ್ರಾಂ ಚಿನ್ನಾಭರಣಗಳನ್ನು ಹಣದ ಅವಶ್ಯಕತೆ ಇರುವುದರಿಂದ, ಹಾಗೆ ಮೈಸೂರಿನಲ್ಲಿ ಹೆಚ್ಚಿನ ದರ ಸಿಗುವ ಅವಕಾಶ ಇರುವುದರಿಂದ ಶುಕ್ರವಾರ ಮಧ್ಯಾಹ್ನ ಮೈಸೂರಿನಲ್ಲಿ ಅಶೋಕ ರಸ್ತೆಯ ಚಿನ್ನದ ಅಂಗಡಿಯಲ್ಲಿ ಕರಗಿಸಿ ಅದನ್ನು ಅಲ್ಲೇ ಮಾರಾಟ ಮಾಡಿ 50 ಲಕ್ಷ ರೂಪಾಯಿ ಹಣವನ್ನು ಪಡೆದುಕೊಂಡು ಮಧ್ಯರಾತ್ರಿ ಎರಡು ಗಂಟೆ ಸಮಯದಲ್ಲಿ ದೇವರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಗೊಳ ಸಮೀಪ ಕೆಟ್ಟು ನಿಂತ ಲಾರಿಯ ಬಳಿಯಲ್ಲಿ ನಿಂತಿದ್ದ ವ್ಯಕ್ತಿಗಳು ಕಾರನ್ನು ಅಡ್ಡಗಟ್ಟಿ ನಿಲ್ಲಿಸಿ ಹಣ ನೀಡುವಂತೆ ಇವರನ್ನು ಕೇಳಿಕೊಂಡಾಗ ತಮ್ಮ ಬಳಿ ಯಾವುದೇ ಹಣವಿಲ್ಲ ಎಂದು ಹೇಳಿದಾಗ ಇವರಿಬ್ಬರನ್ನು ಬೇರೆ ಕಾರಿನಲ್ಲಿ ಕೂರಿಸಿಕೊಂಡು ಇವರ HR 26 C L 5200 ಸಂಖ್ಯೆಯ ಮಿನಿ ಕೂಪರ್ ಕಾರನ್ನು ಅಪರಿಸಿದ್ದಾರೆ. ನಂತರ ಇವರನ್ನು ಇವರಿಗೆ ತಿಳಿಯದ ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಇವರಿಬ್ಬರೂ ನಡೆದುಕೊಂಡೆ ಬಂದು ಮುಖ್ಯ ರಸ್ತೆಗೆ ಸೇರಿ ನಂತರ ಪೇಪರ್ ಕಾರಿಗೆ ಅಡ್ಡಗಟ್ಟಿ ನಿಲ್ಲಿಸಿ ಆ ಕಾರಿನಲ್ಲಿ ಬಂದು ಪೊಲೀಸರಿಗೆ ದೂರನ್ನು ನೀಡಿದ್ದಾರೆ. ಕಾರಿನ ಡಿಕ್ಕಿಯಲ್ಲಿ ಇದ್ದ 50 ಲಕ್ಷ ರೂಪಾಯಿ ಹಾಗೂ ಕಾರು ಸೇರಿ ಒಟ್ಟು 70 ಲಕ್ಷ ರೂಪಾಯಿ ಮೌಲ್ಯ ಅಂದಾಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಡಿವೈಎಸ್ಪಿ, ಮೂರು ಇನ್ಸ್ಪೆಕ್ಟರ್ ಏಳು ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಂದು ಘಟನಾ ಸ್ಥಳಕ್ಕೆ ಐಜಿಪಿ ರವರು ಭೇಟಿ ನೀಡಿದ್ದಾರೆ. ದರೋಡೆ ಕೋರರು ಅಪಹರಿಸಿದ್ದ ಮಿನಿ ಕೂಪರ್ ಕಾರು ಕೊಳ್ತೋಡು ಬೈಗೂಡುವಿನಲ್ಲಿ ಪತ್ತೆ ಹೆಚ್ಚಲಾಗಿದೆ. ಮೂರು ವಾಹನ, ಹಾಗೂ ಒಂದು ಗೂಡ್ಸ್ ವಾಹನದಲ್ಲಿ ಬಂದು ಇವರನ್ನು ಅಡ್ಡಗಟ್ಟಿ ದರೋಡೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Latest Indian news

Popular Stories