ಮಂಡ್ಯ: ರಸ್ತೆ ಬದಿಯ ಹಳ್ಳಕ್ಕೆ ಕಾರು ಉರುಳಿ ಬಿದ್ದು ಮೂವರು ಯುವಕರು ದುರ್ಮರಣಕ್ಕೀಡಾಗಿರುವ ಘಟನೆ ತಾಲೂಕಿನ ಅಕ್ಕಿ ಹೆಬ್ಬಾಳು ಬಳಿ ನಡೆದಿದೆ.
ಕೆ.ಆರ್ ಪೇಟೆ ಪಟ್ಟಣದ ಅನಿಚಿತ್, ಪವನ್ ಶೆಟ್ಟಿ ಹಾಗೂ ಚಿರು ಸಾವನಪ್ಪಿದ ದುರ್ದೈವಿಗಳಾಗಿದ್ದಾರೆ.
ಶನಿವಾರ ರಾತ್ರಿ ಮೂವರು ಹೋಂಡಾ ಸಿಟಿ ಕಾರಿನಲ್ಲಿ ಕೆ.ಆರ್ ಪೇಟೆ -ಭೇರ್ಯ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ ಅಕ್ಕಿ ಹೆಬ್ಬಾಳು ಸೇತುವೆ ಬಳಿ ನಿಯಂತ್ರಣ ತಪ್ಪಿದ ಕಾರು ಹಳ್ಳಕ್ಕೆ ಉರುಳಿ ಬಿದ್ದಿದೆ.ತಕ್ಷಣ ಸ್ಥಳೀಯರು ರಕ್ಷಣೆಗೆ ಮುಂದಾದರಾದರೂ ತೀವ್ರ ಗಾಯಗೊಂಡಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.ಕೆ.ಆರ್ ಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.