
Crime
ರಾಜ್ಯದಲ್ಲೂ ಮತಾಂತರ ನಿಷೇಧ ಕಾಯ್ದೆ ಜಾರಿ: ಸಿ.ಟಿ.ರವಿ
ಬೆಂಗಳೂರು, ನ.3 (ಯುಎನ್ಐ): ಅಲಹಾಬಾದ್ ಹೈಕೋರ್ಟ್ ಆದೇಶದಂತೆ, ಕರ್ನಾಟಕ ಸರ್ಕಾರ ಕೂಡ ವಿವಾಹದ ಉದ್ದೇಶಕ್ಕಾಗಿ ಮತಾಂತರವನ್ನು ನಿಷೇಧಿಸುವ ಕಾನೂನನ್ನು ಜಾರಿಗೆ ತರಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಹಾಳು ಮಾಡುವಾಗ ನಾವು ಮೌನವಾಗಿರುವುದಿಲ್ಲ. ಮತಾಂತರದ ಕೃತ್ಯದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಮತ್ತು ತ್ವರಿತ ಶಿಕ್ಷೆ ವಿಧಿಸಬೇಕಾಗಿದೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.
ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ , ಕೇವಲ ಮದುವೆ ಉದ್ದೇಶಕ್ಕಾಗಿ ಮತಾಂತರ ಆಗುವುದನ್ನು ಒಪ್ಪಲಾಗದು ಎಂದು ತೀರ್ಪು ನೀಡಿತ್ತು. ತಮ್ಮ ಮದುವೆ ಬಳಿಕ ಮೂರು ತಿಂಗಳ ರಕ್ಷಣೆ ನೀಡುವಂತೆ ಮನವಿ ಮಾಡಿದ ಜೋಡಿಯೊಂದರ ಅರ್ಜಿಗೆ ಮಧ್ಯಪ್ರವೇಶಿಸಲು ನಿರಾಕರಿಸುತ್ತಾ ಕೋರ್ಟ್ ಈ ತೀರ್ಪು ನೀಡಿತ್ತು.




