
CrimeDakshina Kannada
ನಿಷೇಧಿತ ಮಾದಕ ವಸ್ತು ಮಾರಾಟ ಇಬ್ಬರ ಬಂಧನ
ಮಂಗಳೂರು: Methamphetamine ಮತ್ತು 250 LSD ಸ್ಟ್ಯಾಂಪ್ ಡ್ರಗ್‍ನ್ನು ಅಕ್ರಮವಾಗಿ ಸಾಗಾಟ ಮಾಡಿ ಮಾರಾಟ ಮಾಡಲು ಯತ್ನಿಸಿದ ಇಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಶಿಶಿರ್ ದೇವಾಡಿಗ ಮತ್ತು ಶುಶಾನ್.ಎಲ್. ಬಂಧಿತರು.
ಸೋಮವಾರ ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರ ಸಾರ್ವಜನಿಕ ರಸ್ತೆ ಬದಿಯಲ್ಲಿ ಸ್ವಿಪ್ಟ್ ಕಾರಿನಲ್ಲಿ ಬಂದಿರುವ ಆರೋಪಿಗಳು 132 ಗ್ರಾಂ ತೂಕದ Methamphetamine ಮತ್ತು 250 LSD ಸ್ಟ್ಯಾಂಪ್ ಡ್ರಗ್‍ನ್ನು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿರುವ ಪೊಲೀಸರು ಮಾದಕ ವಸ್ತು, 3,70,050 ರುಪಾಯಿ ಹಾಗು ಸ್ವಿಪ್ಟ್ ಕಾರು ವಶಪಡಿಸಿಕೊಂಡಿದ್ದಾರೆ.
ಒಟ್ಟು ರೂ.14,01,050 ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




