ಉಡುಪಿ: ಮಿಯ್ಯಾರು ಗ್ರಾಮದ ಬೆರ್ಮಲ್ಲಿಯಲ್ಲಿ ತೆಂಗಿನ ಕಾಯಿ ಕೀಳಲಿ ಮರ ಹತ್ತಿದಾಗ ಆಕಸ್ಮಿಕ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟಿದ್ದಾರೆ.
ಇಂದು ಬೆಳಿಗ್ಗೆ ಮಿಯಾರು ಗ್ರಾಮದ ಬೆರ್ಮಲ್ಲಿ ಮನೆ ಎಂಬಲ್ಲಿ ಸಂದೇಶ್ ಎಂಬುವರ ಮನೆಗೆ ತೆಂಗಿನಕಾಯಿ ಕೀಳಲು ಹೋಗಿದ್ದು, ತೆಂಗಿನಕಾಯಿ ಕೀಳುತ್ತಿರುವಾಗ ತೆಂಗಿನ ಮರದಿಂದ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಾಯಗೊಂಡಿದ್ದರು.
ಕೂಡಲೇ ಚಿಕಿತ್ಸೆಗೆ ಕಾರ್ಕಳ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಯ ವೈದ್ಯಾಧಿಕಾರಿಯವರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು ಅಲ್ಲಿಂದ ಮಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯಾಧಿಕಾರಿಯವರು ಪರೀಕ್ಷೀಸಿ ಅಶೋಕರವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯುಡಿಆರ್ 10/2024ಕಲಂ 174 ಸಿಆರ್.ಪಿ.ಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.