ಉಡುಪಿ: ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕಿಟಕಿ ಸರಳು ಮುರಿದು ಕಳ್ಳತನಕ್ಕೆ ಯತ್ನ

ಉಡುಪಿ: ನಗರದ ಹಳೆ ಅಂಚೆ ಕಚೇರಿ ರಸ್ತೆಯಲ್ಲಿರುವ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಫೆ.24ರ ಮಧ್ಯಾಹ್ನದಿಂದ ಫೆ.26ರ ಬೆಳಗಿನ ಮಧ್ಯಾವಧಿಯಲ್ಲಿ ನುಗ್ಗಿದ ಕಳ್ಳರು ಕವಿಗೆ ಯತ್ನಿಸಿರುವ ಘಟನೆ ನಡೆದಿದೆ.

ಬ್ಯಾಂಕಿನ ಮಹಡಿಗೆ ಹೋಗುವ ಮೆಟ್ಟಿಲು ಬಳಿಯ ಗೇಟಿನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಬ್ಯಾಂಕಿನ ಕಿಟಕಿಯ ಒಂದು ಬದಿಯ ಸರಳುಗಳನ್ನು ತುಂಡು ಮಾಡಿ ಒಳ ಪ್ರವೇಶಿಸಿದ್ದಾರೆ. ಬಳಿಕ ಬ್ಯಾಂಕಿನ ಎದುರಿನ ವರಾಂಡದಲ್ಲಿನ ಕೊಲಸ್ಟಲ್ ಗೇಟ್ನ ಬೀಗ ಮುರಿದು, ಬ್ಯಾಂಕಿನ ಒಳಗೆ ಇದ್ದ ಗೋಡ್ರೇಜ್ ಕಪಾಟು, ಕ್ಯಾಶ್ ಕೌಂಟರ್ ನಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿಯಾಗಿ ಮಾಡಿ ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆಂದು ದೂರಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Latest Indian news

Popular Stories