ಉಡುಪಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಉಡುಪಿ, ಫೆ.27; ನಗರದ ಹಿರಣ್ಯ ಫೈನಾನ್ಸ್ ಹಿಂಭಾಗ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ಶವವು ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂಬ ಸಂಶಯ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿದ್ದು ಎಸ್.ಐ. ಪುನೀತ್ ಕುಮಾರ್, ತನಿಖಾ ಸಹಾಯಕಿ ನೇತ್ರಾವತಿ, ಹೆಡ್ ಕಾನ್ಸ್ಟೇಬಲ್ ಆಶಾಲತಾ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದಿಂದ ಕಳೇಬರವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು ನೆರವಾದರು. ಮೃತರ ವಾರಸುದಾರರು ತುರ್ತಾಗಿ ನಗರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Latest Indian news

Popular Stories