CrimeFeatured StoryUdupi

ಉಡುಪಿ: ಮಾದಕ ದ್ರವ್ಯ ಪ್ರಕರಣ: ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಬಂಧನ

ಉಡುಪಿ: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು, ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ಮಂಗಳೂರು ಅವರು ಆ.13ರಂದು ಬಂಧನ ಆದೇಶ ಹೊರಡಿಸಿದ್ದರು. ಅದರಂತೆ ಇಕ್ಬಾಲ್‌ನನ್ನು ಬಂಧಿಸಲಾಗಿದೆ.

ಬಂಧಿತನ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ತಲಾ ಎರಡು ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಐದು ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿವೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಇಕ್ಬಾಲ್ ಶೇಖ್‌ನನ್ನು ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.

Back to top button