ಉಡುಪಿ: ಪ್ರತ್ಯೇಕ ಪ್ರಕರಣ – ಇಬ್ಬರು ನಾಪತ್ತೆ

ಉಡುಪಿ: ಪುತ್ತೂರು ಗ್ರಾಮದ ನಿಟ್ಟೂರಿನ ನಿವಾಸಿ ವಿನೋದ ಕುಚಲ (19) ಎಂಬ ಯುವಕನು ಫೆಬ್ರವರಿ 8 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.

168ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವ್ಯಕ್ತಿ ನಾಪತ್ತೆ:

ಉಡುಪಿ: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ನಿವಾಸಿ ಸತ್ಯಈಶ ಶೆಟ್ಟಿ (46) ಎಂಬ ವ್ಯಕ್ತಿಯು 2023 ರ ನವೆಂಬರ್ 7 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ತುಳು, ಹಿಂದಿ, ಇಂಗ್ಲೀಷ್ ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂ: 08253-271100, ಅಜೆಕಾರು ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಮೊ.ನಂ 94808054701, ಮೊ.ನಂ: 9480805471, ಕಾರ್ಕಳ ವೃತ್ತ ಪೊಲೀಸ್ ನಿರೀಕ್ಷಕರ ದೂ.ಸಂ: 08258-231083 ಅಥವಾ ಜಿಲ್ಲಾ ಪೊಲೀಸ್ ಕಛೇರಿ ದೂ.ಸಂ: 0820-2534777 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories