ಮಂಗಳೂರು: ಯುನಿಸೆಕ್ಸ್ ಸಲೂನ್‌ಗಳು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಪೊಲೀಸ್ ಆಯುಕ್ತರ ಸೂಚನೆ

ಮಂಗಳೂರು, ಸೆ.23: ಯುನಿಸೆಕ್ಸ್ ಸಲೂನ್‌ನಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆಸುವುದು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. ಟ್ರೇಡ್ ಲೈಸೆನ್ಸ್ ಪಡೆಯಲು ಮತ್ತು ಸರ್ಕಾರ ನಿಗದಿಪಡಿಸಿದ ಇತರ ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಅಗರ್ವಾಲ್ ಮಾತನಾಡಿ, “ನಗರದಲ್ಲಿ ಕೆಲವು ಯುನಿಸೆಕ್ಸ್ ಸಲೂನ್‌ಗಳು ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿವೆ ಎಂದು ನಮಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ 14 ಸಲೂನ್‌ಗಳ ಮೇಲೆ ದಿಢೀರ್‌ ದಾಳಿ ನಡೆಸಲಾಗಿದೆ.

“ಸಲೂನ್ ಮಾಲೀಕರು ತಮ್ಮ ಎಲ್ಲಾ ಉದ್ಯೋಗಿಗಳ ಪೊಲೀಸ್ ದೃಢೀಕರಣ ಪ್ರಮಾಣಪತ್ರವನ್ನು ಪಡೆಯಬೇಕು. ಎಲ್ಲಾ ಗ್ರಾಹಕರ ವಿವರಗಳನ್ನು ದಾಖಲಿಸಬೇಕು. ಇಲ್ಲದಿದ್ದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು,” ಎಂದು ಹೇಳಿದರು.

Latest Indian news

Popular Stories