
Crime
ಕೊಡಗು: ವಿರಾಜಪೇಟೆಯಲ್ಲಿ ಡಿಎಸ್ಎಸ್ ಪ್ರತಿಭಟನೆ
ಮಡಿಕೇರಿ ಅ. 7 : ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಕರ್ನಾಟಕದ ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿತು.
ವಿರಾಜಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿ ಎದರು ಜಮಾಯಿಸಿದ ಸಂಘಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಸಂಘಟನೆಯ ಪ್ರಮುಖರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಯುವತಿಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಸಂಘಟನೆಯ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಇದ್ದರು.




