ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಅಡ್ಯನಡ್ಕ ಬಳಿಯ ಕರ್ನಾಟಕ ಬ್ಯಾಂಕ್ ಶಾಖೆಗೆ ನುಗ್ಗಿದ ಕಳ್ಳರು ಲಾಕರ್ ಒಡೆದು ಕೋಟ್ಯಂತರ ರೂ. ನಗದು ಹಾಗೂ ಚಿನ್ನಾಭರಣ ದರೋಡೆಗೈದಿದ್ದಾರೆ.
ಕೇರಳ-ಕರ್ನಾಟಕ ಗಡಿಭಾಗದಲ್ಲಿರುವ ಈ ಕರ್ನಾಟಕ ಬ್ಯಾಂಕ್ ಹಳೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಸುಮಾರು 20 ವರುಷ ಹಳೆಯ ಕಟ್ಟಡದ ಸುತ್ತಲೂ ಕಾಡು-ಪೊದೆಗಳು ಆವರಿಸಿತ್ತು. ಈ ಪೊದೆಯ ಭಾಗದಿಂದಲೇ ಕಳ್ಳರು ಒಳನುಗ್ಗಿದ್ದಾರೆ. ಬ್ಯಾಂಕ್ ನ ಹಿಂಭಾಗದ ಕಿಟಕಿ ಸರಳನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿದು ಕಳ್ಳರು ಒಳನುಗ್ಗಿದ್ದಾರೆ. ಬ್ಯಾಂಕ್ ಲಾಕರ್ ಮುರಿದು ಕೋಟ್ಯಂತರ ರೂ. ನಗದು ಹಾಗೂ ಚಿನ್ನಾಭರಣ ದರೋಡೆಗೈದಿದ್ದಾರೆ.
ಇಂದು ಬೆಳಗ್ಗೆ ಸಿಬ್ಬಂದಿ ಇಂದು ಬೆಳಗ್ಗೆ 9.30ಗೆ ಬ್ಯಾಂಕ್ ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬ್ಯಾಂಕ್ ಕಟ್ಟಡದ ಬಗ್ಗೆ ಅರಿವಿರುವವರೇ ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.