Crime

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಕರೆ

ಬೀದರ್,ಅ.1:-:- ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2020ರ ಜನವರಿ 1ರಂದು ಪ್ರಚುರಪಡಿಸಿದ ತರುವಾಯ ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ನಿರ್ದಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ತೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ) ಒಟ್ಟು ಕನಿಷ್ಟ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಬಗ್ಗೆ ಶೈಕ್ಷಣಿಕ ಸಂಸ್ಥೆಗಳಿಂದ ಅನುಬಂಧ-2ರಲ್ಲಿ ಪ್ರಮಾಣ ಪತ್ರದೊಂದಿಗೆ ನಿರಂತರ ಪ್ರಕ್ರಿಯೆ ಅವಧಿಯಲ್ಲಿ ಅರ್ಹ ಮತದಾರರು ಇನ್ನು ಹೆಚ್ಚಿನ ಆಸಕ್ತಿ ವಹಿಸಿ ತಮ್ಮ ಹೆಸರನ್ನು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದ ಅಕ್ಟೋಬರ್ 8ರೊಳಗಾಗಿ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ತಹಸೀಲ್ದಾರ ಕಚೇರಿಯಲ್ಲಿ ದ್ವಿಪ್ರತಿಯಲ್ಲಿ ಅರ್ಜಿ ನಮೂನೆ -19ನ್ನು ಸಲ್ಲಿಸುವ ಮೂಲಕ ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಕರೆ ನೀಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button