ವಿಶ್ವಹೃದಯ ದಿನ ಅರಿವು ಕಾರ್ಯಕ್ರಮ ಉದ್ಘಾಟನೆ

ಬೆಂಗಳೂರು,ಸೆ.29(ಯುಎನ್‍ಐ) “ವಿಶ್ವ ಹೃದಯ ದಿನಾಚರಣೆ” ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ಏರ್ಪಡಿಸಲಾಗಿದ್ದ ವಿಶ್ವ ಹೃದಯ ದಿನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಧಮೇರ್ಂದ್ರ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳ್‍ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ನಾಲ್ಕು ತಾಲ್ಲೂಕುಗಳ ತಹಶೀಲ್ದಾರ್‍ಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು. “ಹೃದಯ ರೋಗಗಳನ್ನು ತಡೆಯಲು ಹೃದವಂತರಾಗಿರಿ” ಎಂಬುದು ಪ್ರಸಕ್ತ ವರ್ಷದ ಘೋಷವಾಕ್ಯವಾಗಿದೆ.

Latest Indian news

Popular Stories