Crime

ಕಲಬುರಗಿ: ಡಿಸೆಂಬರ್ 3 ರಂದು ವಿಶ್ವ ವಿಕಲಚೇತನರ ದಿನಾಚರಣೆ

ಕಲಬುರಗಿ.ಡಿ.02:-ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 2016ರ ವಿಕಲಚೇತನರ ಕಾಯ್ದೆಯಡಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು 2020ರ ಡಿಸೆಂಬರ್ 3 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಹೊಸ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಆರ್.ಜೆ. ಸತೀಶ ಸಿಂಗ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಆರ್. ಶೆಟ್ಟರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣಕುಮಾರ ಬಿ. ಕಣ್ಣಿ, ಕಾರ್ಯದರ್ಶಿ ಶರಣಬಸವ ಸಿ. ಪಸ್ತಾಪೂರ, ಎರಡನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಸಾವಿತ್ರಿ ಎಸ್. ಘಂಟಿಮಠ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳು ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ. ಪ್ರಸಾದ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ ಖರ್ಬಿಕರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ್ ಎಂ., ಕಲಬುರಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಲಿನ್ ಅತುಲ್, ಕಲಬುರಗಿ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡ್ವೆ, ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶಕುಮಾರ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ, ಕಲಬುರಗಿ (ಕಾ ಮತ್ತು ಸು) ಉಪ ಪೊಲೀಸ್ ಆಯುಕ್ತ ಡೆಕ್ಕಾ ಕಿಶೋರ ಬಾಬು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಈ ಕಾರ್ಯಕ್ರಮದಲ್ಲಿ ಕಲಬುರಗಿ ಸಹಾರಾ ಸಂಸ್ಥೆಯ ನಿರ್ದೇಶಕ ಮಸ್ತಾನ ಬಿರಾದಾರ ಹಾಗೂ ಕಲಬುರಗಿ ಎ.ಪಿ.ಡಿ. ನೀತಿ ಮತ್ತು ವಕಾಲತ್ತು ವಿಭಾಗದ ಸಂಯೋಜಕ ನಾಗಪ್ಪ ಜಿ. ಆವಟಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಈ ಕಾರ್ಯಕ್ರಮವನ್ನು ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ವಿಕಲಚೇತನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಹಾಗೂ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ ಮತ್ತು ಎಂ.ಆರ್. ಡಬ್ಲ್ಯೂ) ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button