
Crime
ಯಡಿಯೂರಪ್ಪ ತನಗೆ ತಾನೇ ಸೆಲ್ಫ್ ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ: ಡಿ.ಕೆ.ಶಿವಕುಮಾರ್
ಬೆಂಗಳೂರು, ಜ.1(ಯುಎನ್ಐ) ಬಿ.ಎಸ್.ಯಡಿಯೂರಪ್ಪ ಅವರನ್ನು ಯಾರೂ ಕೇಳದೇ ಇದ್ದರೂ ಇನ್ನೂ ಎರಡು ವರ್ಷ ತಾವೇ ಮುಖ್ಯಮಂತ್ರಿ ಎಂದು ಹೇಳಿ ಸೆಲ್ಫ್ ಸರ್ಟಿಫಿಕೇಟ್ ಪಡೆದುಕೊಂಡಿದ್ದು ನೋಡಿದರೆ ಬಿಜೆಪಿಯಲ್ಲಿ ಏನೋ ನಡೆಯುತ್ತಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚ್ಯವಾಗಿ ಯಡಿಯೂರಪ್ಪ ಅವರನ್ನು ಕುಟುಕಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ತಮ್ಮನ್ನು ತಾವು ಹೊಗಳಿಕೊಳ್ಳುತ್ತಿದ್ದಾರೆ. ಇತ್ತ ಬಿಜೆಪಿಯ ಶಾಸಕರು ಸಹ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಇದೆಲ್ಲವನ್ನೂ ನೋಡಿದೆ ಬಿಜೆಪಿ ಪಾಳಯದಲ್ಲಿ ಏನೋ ನಡೆಯುತ್ತಿದೆ ಎನ್ನುವುದು ಗೊತ್ತಾಗುತ್ತಿದೆ ಎಂದರು.




