
Crime
ಕೊರೋನ ಹೊಸ ಅಲೆ ನಡುವೆಯೂ ನಿಗದಿಯಂತೆ ತರಗತಿಗಳ ಆರಂಭ: ಯಡಿಯೂರಪ್ಪ, ಸುರೇಶ್ ಕುಮಾರ್
ಬೆಂಗಳೂರು, ಡಿ 23 [ಯುಎನ್ಐ] ಕೊರೋನಾ ಸೋಂಕಿನ ಹೊಸ ವೈರಸ್ ಭೀತಿ ನಡುವೆಯೂ ಪೂರ್ವ ನಿಗದಿಯಂತೆ ರಾಜ್ಯಾದ್ಯಂತ ಜನವರಿ 1 ರಿಂದ ಶಾಲೆಗಳು ಆರಂಭವಾಗಲಿದೆ.
ಜನವರಿಯಿಂದ 10 ಮತ್ತು 12ನೇ ತರಗತಿಗಳು ಪ್ರಾರಂಭವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ತಾಂತ್ರಿಕ ಸಲಹಾ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಆರಂಭಿಸಲು ಯಾವುದೇ ತೊಡಕಿಲ್ಲ. ಏನಾದರೂ ಹೊಸ ಬೆಳವಣಿಗೆಗಳಿದ್ದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಇದಕ್ಕೂ ಮುನ್ನ ಪ್ರತ್ಯೇಕವಾಗಿ ಸುದ್ದಿಗಾರರ ಜತೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ತರಗತಿ ಆರಂಭದ ವೇಳೆ ಪ್ರಮಾಣಿಕ ಕಾರ್ಯಾಚರಣೆ ವಿಧಾನವನ್ನು ಕಟ್ಟುನಿಟ್ಟಾಗಿ ಅನುಸರಿಸಲು ಸೂಚಿಸಲಾಗಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಪರಾಮರ್ಶಿಸಿ, ಕೂಲಂಕಷವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.




