ಕಡಬ: ಸೋಮವಾರ ಇಲ್ಲಿನ ಇಲ್ಲಿನ ಉಪ್ಪಿನಂಗಡಿ- ರಾಜ್ಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಕಾರಿಗೆ ಹೊಡೆದ ಪರಿಣಾಮ ಮಗು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.
ಕಾರು ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬಸ್ ಬರುತ್ತಿದ್ದ ವೇಳೆ ಇಟ್ಟೂರು ಗ್ರಾಮ ಪಂಚಾಯಿತಿ ಬಳಿ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ರವಾನಿಸಲಾಗಿದೆ, ನಂತರ ಪುತ್ತೂರಿಗೆ ರವಾನಿಸಲಾಗಿದೆ.
ಅಪಘಾತದಲ್ಲಿ ಬಸ್ ಚಾಲಕರು ಹಾಗೂ ಬಸ್ ನಲ್ಲಿದ್ದ ಇತರ ಇಬ್ಬರು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯವಾಗಿದೆ.