ಕೊಳೆತ ಸ್ಥಿತಿಯಲ್ಲಿ ಖ್ಯಾತ ವಕೀಲರ ಮೃತದೇಹ ಪತ್ತೆ; ವಾರಸುದಾರರ ಪತ್ತೆಗೆ ಪೊಲೀಸರಿಂದ ಕೋರಿಕೆ

ಮಂಗಳೂರು: ಖ್ಯಾತ ನ್ಯಾಯವಾದಿಯೊಬ್ಬರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ಮಂಗಳೂರಿನಲ್ಲಿ ನಡೆದಿದೆ.

ನಗರದ ಖ್ಯಾತ ನ್ಯಾಯವಾದಿ ಬಿ.ಹರೀಶ್ ಆಚಾರ್ಯ (60) ಅವರ ಮೃತದೇಹ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಬೆಳಗ್ಗೆ ನಗರದ ಬಿಜೈ ಬಾರಬೈಲ್‌ನ ಅವರ ಮನೆಯಲ್ಲಿ ಪತ್ತೆಯಾಗಿದ್ದು ಅವರ ರಕ್ತ ಸಂಬಂಧಿಕರಿದ್ದರೆ ಸಂಪರ್ಕಿಸುವಂತೆ ಉರ್ವ ಠಾಣಾ (0824-2220822/2220800) ಪೊಲೀಸರು ತಿಳಿಸಿದ್ದಾರೆ.

ಹರೀಶ್ ಆಚಾರ್ಯ ಅವರು ಶುಕ್ರವಾರದಂದು ನ್ಯಾಯಾಲಯದ ಕಲಾಪಕ್ಕೆ ಹಾಜರಾಗಿದ್ದರು. ಜು.9ರ ಬೆಳಗ್ಗೆ 10ರಿಂದ ಜು.11ರ ಬೆಳಗ್ಗೆ 11ರ ನಡುವೆ ಮನೆಯಲ್ಲಿರುವ ಸಮಯ ಹೃದಯಾಘಾತ ಅಥವಾ ಆಕಸ್ಮಿಕವಾಗಿ ಮೃತಪಟ್ಟಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Latest Indian news

Popular Stories