ಬಂಟ್ವಾಳ: ನಿಯಂತ್ರಣ ತಪ್ಪಿದ ಬಸ್ ಕಾಂಪೌಂಡ್’ಗೆ ಡಿಕ್ಕಿ – ಪ್ರಯಾಣಿಕರಿಗೆ ಗಾಯ

ಬಂಟ್ವಾಳ, ಫೆ.11: ತಾಲೂಕಿನ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗುಡ್ಡದ ಮೇಲೆ ಬಸ್ ಚಲಾಯಿಸಿ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಗಂಭೀರವಾಗಿ ಗಾಯಗೊಂಡು ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಫೆಬ್ರವರಿ 11 ರ ಶನಿವಾರದಂದು ಈ ಅಪಘಾತ ಸಂಭವಿಸಿದೆ. ಬಸ್ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದಿದ್ದರಿಂದ, ಯುವತಿಯು ಬಸ್ಸಿನ ಗಾಜು ಒಡೆದು ಹೊರಕ್ಕೆ ಎಸೆಯಲ್ಪಟ್ಟಳು. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇತರ ಹಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಜಾಯಿಂಟ್ ವೀಲ್ ತುಂಡಾಗಿದೆ ಎಂದು ಚಾಲಕ ಹೇಳುತ್ತಿದ್ದಾನೆ ಎಂದು ಸ್ಥಳೀಯರು ಹೇಳುತ್ತಾರೆ. ಆದರೆ ಅತಿವೇಗ ಮತ್ತು ಇನ್ನೊಂದು ಬಸ್ ಅನ್ನು ಹಿಂದಿಕ್ಕಲು ಹೋಗಿ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories