ಬಿಸಿ ರೋಡ್ ರೈಲ್ವೆ ಮೇಲ್ಸೇತುವೆ ಬಳಿ ಅಪರಿಚಿತ ಶವ ಪತ್ತೆ

ಬಂಟ್ವಾಳ, ಫೆ.3: ಬಿಸಿ ರೋಡ್ ಮುಖ್ಯ ವೃತ್ತದ ಬಳಿಯ ರೈಲ್ವೆ ಮೇಲ್ಸೇತುವೆಯಲ್ಲಿ ಶುಕ್ರವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಮಲಗಿದ್ದ ಭಂಗಿಯಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯ ವಯಸ್ಸು ಸುಮಾರು 55 ವರ್ಷ.

ಮೃತರು ಬುಧವಾರ ಅದೇ ಸ್ಥಳದಲ್ಲಿ ಮದ್ಯ ಸೇವಿಸಿ ಮಲಗಿದ್ದರು ಎನ್ನಲಾಗಿದೆ. ಶವವನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕ ರಾಮಕೃಷ್ಣ ಮತ್ತು ಸಿಬ್ಬಂದಿ ಭೇಟಿ ನೀಡಿ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Latest Indian news

Popular Stories