ಮಂಗಳೂರು: ಭಾರತ ತಂಡದ ಮಾಜಿ ಕಪ್ತಾನ್ ಎಂ.ಎಸ್.ಧೋನಿ ಶನಿವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಇಂದು ಸಂಜೆ ಕಾಸರಗೋಡಿನಲ್ಲಿ ಧೋನಿ ಅವರ ಸ್ನೇಹಿತ ಡಾ.ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ ಕೆ ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗಿಯಾಗಲಿದ್ದಾರೆ.
ಧೋನಿ ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್ ಆತ್ಮೀಯವಾಗಿ ಬರಮಾಡಿಕೊಂಡರು.
ಕಾಸರಗೋಡಿನ ಬೇಕಲ್ ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳಿದ್ದು, ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಲು ಮುಗಿಬಿದ್ದರು.