ಮಂಗಳೂರು: ಆ್ಯಂಟಿ ಕಮ್ಯೂನಲ್ ವಿಂಗ್ ಕಾರ್ಯಾರಂಭ

ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ನೈತಿಕ ಪೊಲೀಸ್‌ಗಿರಿಗೆ(moral policing) ಕಡಿವಾಣ ಹಾಕಲು ನಿರ್ಧಾರ ಮಾಡಿದೆ. ಅದರಂತೆ ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ (anti communal wing ) ಕಾರ್ಯಾರಂಭವಾಗಿದೆ.

ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ಕೆಲಸ ಮಾಡಲಿದ್ದು, ಸಿಎಸ್​ವಿ ಇನ್ಸ್​ಪೆಕ್ಟರ್ ಸೇರಿದಂತೆ ಐವರು ಸಿಬ್ಬಂದಿಯೊಂದಿಗೆ ಆ್ಯಂಟಿ ಕಮ್ಯೂನಲ್ ವಿಂಗ್ ಕಾರ್ಯಾರಂಭಿಸಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್​ ಜೈನ್ ಮಾಹಿತಿ ನೀಡಿದ್ದಾರೆ.

Latest Indian news

Popular Stories