ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದಿನ್‌ ಬಾವಾ ಜೆಡಿಎಸ್ ಸೇರ್ಪಡೆ

ಮಂಗಳೂರು, ಏ 20 : ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ, ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದಿನ್‌ ಬಾವಾ ಅವರು ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಘೋಷಿಸಿದ್ದಾರೆ.


ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಭಾವುಕರಾಗಿ ಮಾತನಾಡಿದ ಅವರು , ಕಾಂಗ್ರೆಸ್ ಪಕ್ಷದ ಸರ್ವೆಯಲ್ಲಿ ನನ್ನ ಪರ ಮತವಿದ್ದರೂ ಅದನ್ನು ನಗಣ್ಯ ಮಾಡಿ , ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್‌ ನ್ನು ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮಾರಾಟ ಮಾಡಿದ್ದಾರೆ, ನನ್ನನ್ನು ವೈರಿಯಂತೆ ಕಾಡಿದ್ದಂತೆ ಎಂದು ಎಂದು ಆರೋಪಿಸಿದ್ದಾರೆ.


ಈ ಎಲ್ಲಾ ಬೆಳವಣಿಗೆಯ ಹಿನ್ನಲೆಯಲ್ಲಿ ನೊಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಜೆಡಿಎಸ್‌ ಸೇರ್ಪಡೆಯಾಗುತ್ತಿದೆ. ಇಂದು ಮಧ್ಯಾಹ್ನ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

Latest Indian news

Popular Stories