ಮಂಗಳೂರು : ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬಂದಿಯನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ ರಾಘವ (50) ಅತ್ತಾವರ ನಿವಾಸಿ ಎಂದು ತಿಳಿದು ಬಂದಿದೆ.
ಸಿಸಿ ಕ್ಯಾಮೆರಾದಲ್ಲಿ ಕೃತ್ಯ ದಾಖಲಾಗಿರುವ ಸಾಧ್ಯತೆಯಿದ್ದು, ಪರಿಶೀಲನೆ ನಡೆಯುತ್ತಿದೆ. ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವುದು ಕಂಡು ಬಂದಿದೆ.
ಘಟನೆ ವೇಳೆ ಅಂಗಡಿಯಲ್ಲಿ ಒಬ್ಬರೇ ಇದ್ದರೆಂದು ತಿಳಿದುಬಂದಿದೆ. ದರೋಡೆಯೆ ಬೇರೆ ಕಾರಣವೇ ತಿಳಿದು ಬಂದಿಲ್ಲ.ಅಂಗಡಿ ಮಾಲಕರು ಊಟ ಮಾಡಿ ವಾಪಸ್ ಆದಾಗ ಘಟನೆ ಗಮನಕ್ಕೆ ಬಂದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಸ್ಥಳಕ್ಕೆ ಡಿಸಿಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕರ್ಮಿ ಕುತ್ತಿಗೆಗೆ ಇರಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.