ಮಂಗಳೂರು: ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿತ್ತು.
ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರ ನಡುವೆ ನಿನ್ನೆ ಸಂಜೆ ಘರ್ಷಣೆ ನಡೆದಿದ್ದು, ವಿದ್ಯಾರ್ಥಿಗಳ ನಡುವಿನ ಮಾರಾಮಾರಿಯನ್ನು ತಡೆಯಲು ಪೊಲೀಸರು ಮಧ್ಯಪ್ರವೇಶಿಸಬೇಕಾದ ಪರಿಸ್ಥಿತಿ ಎದುರಾಗಿತ್ತು.
ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಾಕಲಾಗಿರುವ ಸಾವರ್ಕರ್ ಅವರ ಪೋಟೋವನ್ನು ತೆಗೆಯುವಂತೆ ಎಬಿವಿಪಿ ಕಾರ್ಯಕರ್ತರು ನಮ್ಮ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆಂದು ಸಿಎಫ್ಐ ಕಾರ್ಯಕರ್ತರು ಆರೋಪಿಸಿದ್ದಾರೆ.
ಕಾಲೇಜಿನ ಕ್ಲಾಸ್ ರೂಮ್ ನಲ್ಲಿ ಸಾವರ್ಕರ್ ಅವರ ಪೋಟೋ ಹಾಕಿದ್ದಕ್ಕಾಗಿ ಕಾಲೇಜು ಪ್ರಾಂಶುಪಾಲರು ಎಬಿವಿಪಿ ಕಾರ್ಯಕರ್ತರಿಂದ ಫೋಟೋ ತೆಗೆಸಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ನಮ್ಮ ಕಾರ್ಯಕರ್ತರಾದ ರಿಫಾಜ್, ಸಿದ್ಧಿಖ್ ಹಾಗೂ ಮರ್ಜುಕ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಸಿಎಫ್ಐ ಆರೋಪಿಸಿದೆ.