ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ: ತುಂಬೆ ವಳವೂರಿನಲ್ಲಿರುವ ಮದುವೆ ಸಭಾಂಗಣವೊಂದರ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿದ್ದು, ಹೊರಗಡೆಯಲ್ಲಿ ಆತನ ಬೈಕ್ ಪತ್ತೆಯಾಗಿದೆ.

ಸಾವಿಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಪೋಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತುಕೊಂಡಿದ್ದು, ಆ ವೇಳೆ ನಿಯಂತ್ರಣ ಕಳೆದು ಕೆಳಗೆ ಬಿದ್ದಿರಬೇಕು ಎಂದು ಶಂಕಿಸಲಾಗಿದೆ.
ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಬೇಕಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಪೆಕ್ಟರ್ ಶಿವಕುಮಾರ್, ಪಿಎಸ್ಐ ಹರೀಶ್ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Latest Indian news

Popular Stories