Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

ಬೆಳ್ತಂಗಡಿ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮೊದಲ ಬಾರಿಗೆ ಎಂಬಂತೆ ಶೇ.100 ಮತದಾನ ಮಾಡುವ ಮೂಲಕ ನಕ್ಸಲ್ ಕೇಂದ್ರಿತ ಬಾಂಜಾರುಮಲೆ ದಾಖಲೆ ‌ನಿರ್ಮಿಸಿದೆ.

ಮತಗಟ್ಟೆ ಸಂಖ್ಯೆ 86 ರ ಸಮುದಾಯ ಭವನದಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇಲ್ಲಿ 51 ಮಹಿಳೆಯರು, 60 ಪುರುಷರು ಸೇರಿ ಒಟ್ಟು 111 ಮತದಾರರಿದ್ದಾರೆ.

ಕಳೆದ ಬಾರಿ 2019 ರಲ್ಲಿ ಇಲ್ಲಿ ಶೇ.99 ಮತದಾನವಾಗಿತ್ತು. ಈ ಬಾರಿ ಜಿಲ್ಲಾ ಸ್ವೀಪ್ ಸಮಿತಿ ಮಾರ್ಗದರ್ಶನದಂತೆ ಬೆಳ್ತಂಗಡಿ ತಾಲೂಕಿನ ಸ್ವೀಪ್ ಸಮಿತಿ ಅಧ್ಯಕ್ಷ ವೈಜಣ್ಣ ಹಾಗೂ ತಂಡ ಶೇ.100 ಮತದಾನ ಮಾಡುವಂತೆ ಊರ ಜನರಲ್ಲಿ ಜಾಗೃತಿ ಮೂಡಿಸಿತ್ತು. ಇದರ ಪರಿಣಾಮ ನೆಟ್ ವರ್ಕ್, ರಸ್ತೆ, ಮೂಲಸೌಕರ್ಯವಿಲ್ಲದ ಪುಟ್ಟ ಉರೊಂದು ಜಿಲ್ಲೆಗೆ ಮಾದರ ನಡೆ ನೆಟ್ಟಿದೆ.‌ ಶೇ. 100 ಮತದಾನವಾದಲ್ಲಿ ದ.ಕ.ಜಿಲ್ಲಾಧಿಕಾರಿಗಳು ವಿಶೇಷ ಬಹುಮಾನವನ್ನು ಘೋಷಿಸಿದ್ದರು.ಶೇ.100 ಮತದಾನದ ಹಿನ್ನೆಲೆ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ವೈಜಣ್ಣ ಸೇರಿದಂತೆ ಸಿಬಂದಿ ಊರಿನ ಮಂದಿಗೆ ಪುಷ್ಪ ನೀಡಿ ಅಭಿನಂದಿಸಿದ್ದಾರೆ. ಮತದನಾದ ಸಲುವಾಗಿ ಇಲ್ಲಿನ‌ 40 ಕುಟುಂಬದ 11 ಮಂದಿ ಸದಸ್ಯರು ಒಂದೆಡೆ ಊಟ ಉಪಹಾರ ಮಾಡುವ ಮೂಲಕ ಕೂಡುಕುಟುಂಬ ಒಂದೆಡೆ ಸೇರಿ ಮತದಾನವನ್ನು ಹಬ್ಬದ ರೀತಿ ಆಚರಿಸಿದ್ದಾರೆ.

Latest Indian news

Popular Stories