ಬೆಳ್ತಂಗಡಿ: ಕಾರು-ಬೈಕ್ ಅಪಘಾತ – ಕಾರ್ಕಳ ಮೂಲದ ಸವಾರ ಮೃತ್ಯು

ದಿ ಹಿಂದುಸ್ತಾನ್ ಗಝೆಟ್: ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ಇನೋವಾ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದಾರೆ.

ಮೃತ ಬೈಕ್‌ ಸವಾರನನ್ನು ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್‌ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ಬೈಕ್‌ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.ಇನ್ನು ತಕ್ಷಣ ಬೈಕ್‌ ಸವಾರನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Latest Indian news

Popular Stories