ಆ್ಯಸಿಡ್ ದಾಳಿ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಲಾ 4 ಲಕ್ಷ ರೂ. ಪರಿಹಾರ: ಡಾ‌.ನಾಗಲಕ್ಷ್ಮೀ ಚೌಧರಿ

ಮಂಗಳೂರು: ಕಡಬದ ಸರಕಾರಿ ಕಾಲೇಜಿನಲ್ಲಿ‌ ಯುವಕನಿಂದ ಆ್ಯಸಿಡ್ ದಾಳಿಗೆ ಒಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿನಿಯರೆಲ್ಲರೂ ಜೀವಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರು ತಮ್ಮ ಪರೀಕ್ಷೆಯ ಬಗ್ಗೆ ಆತಂಕಿತರಾಗಿದ್ದು, ಅವರಿಗೆ ಧೈರ್ಯ ತುಂಬಿದ್ದೇನೆ ಎಂದರು.

ಮೊದಲ ಹಂತದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ತಲಾ 4 ಲಕ್ಷದಂತೆ ಚಿಕಿತ್ಸೆಗಾಗಿ ಸರಕಾರದಿಂದ ವಿತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಮೂವರು ಅಪಾಯದಿಂದ ಪಾರಾಗಿದ್ದಾರೆ. ಸಂತ್ರಸ್ತೆಯರಲ್ಲಿ ಒಬ್ಬಳು 20%, ಮತ್ತೊಬ್ಬಳು 12% ಹಾಗೂ 10%ಗಿಂತಲೂ ಕಡಿಮೆ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ಒಂದು ವಾರಗಳು ಕಳೆದ ಬಳಿಕ ಇಬ್ಬರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುತ್ತದೆ. ಮತ್ತೊಬ್ಬಳ ಗಾಯದ ಪರಿಸ್ಥಿತಿ ನೋಡಿ ಪ್ಲಾಸ್ಟಿಕ್ ಸರ್ಜರಿ ಮಾಡುವ ಬಗ್ಗೆ ಯೋಚನೆ ಮಾಡಲಾಗುತ್ತದೆ ಎಂದರು.

Latest Indian news

Popular Stories