ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ: ಸಂಸದ ನಳಿನ್ ಕುಮಾರ್ ಪ್ರತಿಕ್ರಿಯೇ ಏನು ಗೊತ್ತಾ?

ಮಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದ ಅರುಣ್ ಕುಮಾರ್ ಕುಮಾರ್ ಪುತ್ತಿಲ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಪುತ್ತಿಲ ಪರಿವಾರ ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ. ಇದು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಚುನಾವಣೆಗೆ ನಿಲ್ಲುವ ಹಕ್ಕು ಎಲ್ಲರಿಗೂ ಇದೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ.
ಆದರೆ ಪುತ್ತಿಲ ಅವರ ಮನವೊಲಿಕೆಗೆ ಮನವೊಲಿಕೆಗೆ ಪಕ್ಷ ಪ್ರಯತ್ನ ಮಾಡಿದೆ ಎಂದು ನಳಿನ್ ತಿಳಿಸಿದ್ದಾರೆ.
ಬಿಜೆಪಿಯು ಬಹಳ ವರ್ಷಗಳ ಹೋರಾಟದಿಂದ ಬೆಳೆದು ಬಂದ ಪಕ್ಷ.

ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ನ್ನು ಎದುರಿಸಿ ಲೋಕಸಭೆಯಲ್ಲಿ ಬಿಜೆಪಿ ಅತೀ ಹೆಚ್ಚು ಸೀಟು ಗೆದ್ದಿದೆ. ಹಾಗಾಗಿ ಪಕ್ಷಕ್ಕೆ ಎದುರಾಳಿಯ ಬಗ್ಗೆ ಆತಂಕ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪ್ರತೀ ಚುನಾವಣೆಗೆ ಬಂದಾಗ ಈ ರೀತಿಯ
ಹಲವು ಸಮಸ್ಯೆಗಳು ಉದ್ಭವವಾಗುತ್ತದೆ. ಆ ಎಲ್ಲಾ ಸವಾಲುಗಳನ್ನು ಬಿಜೆಪಿ ಗೆದ್ದು ಗೆಲುವು ಸಾಧಿಸಿದೆ ಎಂದು ಅವರು ಹೇಳಿದರು.

ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಆಗಿನ ಸಮಸ್ಯೆ ಬೇರೆ ಈಗಿನ ವಿಚಾರವೇ ಬೇರೆ.

ಹಾಗಾಗಿ ಈ ಬಾರಿಯ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ನಳಿನ್ ತಿಳಿಸಿದರು.

Latest Indian news

Popular Stories