ಹರೀಶ್ ಪುಂಜಾಗೆ ಜಾಮೀನು


ಬೆಳ್ತಂಗಡಿ: ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳ ಪೈಕಿ, ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ.


ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾರನ್ನು ಬಂಧಿಸಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಆದರೆ ಅವರನ್ನು ಬಂಧಿಸದೇ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿ ಹಿಂತಿರುಗಿದ್ದರು.


ಈ ವೇಳೆ ಅಲ್ಲಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಪೊಲೀಸರ ಮನವೊಲಿಸಿದ್ದು, ಅವರನ್ನು ಠಾಣೆಗೆ ಕಳುಹಿಸಿ ಕೊಡುವುದಾಗಿ ಮಾತು ಕೊಟ್ಟಿದ್ದು, ಈ ಹಿನ್ನೆಲೆಯಲ್ಲಿ ಹರೀಶ್ ಪೂಂಜಾ ಪೊಲೀಸ್ ಠಾಣೆಗೆ ಶರಣಾಗಿದ್ದರು. ಬಳಿಕ ಪೊಲೀಸರು ಠಾಣಾ ಜಾಮೀನಿನಲ್ಲಿ ಹರೀಶ್ ಪೂಂಜಾರನ್ನು ಬಿಡುಗಡೆ ಮಾಡಿದ್ದಾರೆ.

Latest Indian news

Popular Stories