ಸಾಮಾಜಿಕ ಜಾಲತಾಣದಲ್ಲಿ
ಅವಹೇಳನಕಾರಿ ಪೋಸ್ಟ್: ಯುವಕನ ಬಂಧನ
ಬಂಟ್ವಾಳ : ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ ಮೆಕ್ಕಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಯುವಕನೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ ಘಟನೆ ನಡೆದಿದೆ.
ಆರೋಪಿಯು ಇನ್‌ಸ್ಟಾಗ್ರಾಂನಲ್ಲಿ ಮೆಕ್ಕಾದ ಬಗ್ಗೆ ಅವಹೇಳನಕಾರಿ ಯಾಗಿ ಕಮೆಂಟ್ ಮಾಡಿರುವುದಾಗಿ ಆರೋಪಿಸಲಾಗಿದೆ.
ಯುವಕನ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿ, ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.